top of page

ಚದುರಂಗ ಸ್ಪರ್ಧೆ

ದಿನಾಂಕ: 16-3-2021ರಂದು ಪದವಿ ಪೂರ್ವ ಶಿಕ್ಷಣ ಇಲಾಖೆ, ಉಡುಪಿ ಹಾಗೂ ವಿದ್ಯೋದಯ ಪದವಿ ಪೂರ್ವ ಕಾಲೇಜು, ಉಡುಪಿ ಇವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಜಿಲ್ಲಾ ಮಟ್ಟದ ಚದುರಂಗ ಸ್ಪರ್ಧೆಯಲ್ಲಿ ಉಡುಪಿಯ ವಿದ್ಯೋದಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಸಮಗ್ರ ಪ್ರಶಸ್ತಿಯನ್ನು ಪಡೆದುಕೊಳ್ಳುವುದರ ಮೂಲಕ ನಾಲ್ಕು ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುವುದು ಉತ್ಕೃಷ್ಟ ಸಾಧನೆಯಾಗಿದೆ.

ಕೀರ್ತನ್ ಪ್ರಭು, ಪ್ರಜ್ವಲ್ ಪಿ, ಕುಮಾರ್ ತೇಜ್, ಕೀರ್ತನಾ ಸಾಲ್ಯಾನ್ ವಿಜೇತ ತಂಡದೊಂದಿಗೆ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಸಂದೀಪ್ ಕುಮಾರ್ ಹಾಗೂ ಉಡುಪಿ ಜಿಲ್ಲೆಯ ಕ್ರೀಡಾ ಸಂಯೋಜಕರಾದ ಶ್ರೀ ದಿನೇಶ್ ಮತ್ತು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರು ಶ್ರೀ ವಿನಯ್ ಉಪಸ್ಥಿತರಿದ್ದರು.

ಕರಾಟೆ

ದಿನಾಂಕ: 16-3-2021 ರಂದು ಪದವಿ ಪೂರ್ವ ಶಿಕ್ಷಣ ಇಲಾಖೆ, ಉಡುಪಿ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು, ಉಡುಪಿ ಇವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಉಡುಪಿ ವಿದ್ಯೋದಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ನಿಸರ್ಗ, ರಿಯಾ, ಪ್ರತೀಕ್ಷಾ  ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಟೇಬಲ್ ಟೆನ್ನಿಸ್

ದಿನಾಂಕ: 15-3-2021 ರಂದು ಪದವಿ ಪೂರ್ವ ಶಿಕ್ಷಣ ಇಲಾಖೆ, ಉಡುಪಿ ಹಾಗೂ ಮಹಾತ್ಮಾ ಗಾಂಧಿ ಮೆಮೋರಿಯಲ್ ಪದವಿ ಪೂರ್ವ ಕಾಲೇಜು, ಉಡುಪಿ ಇವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾವಳಿಯಲ್ಲಿ ಉಡುಪಿ ವಿದ್ಯೋದಯ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡ ದ್ವಿತೀಯ ಸ್ಥಾನ ಪಡೆದು ಮೂರು ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಬಾಲಕಿಯರು    :    ಮೇಘನಾ, ಕೋರೆಲ್,
ಬಾಲಕರಲ್ಲಿ    :    ಸನ್ಮಾನ್

ಶಟಲ್ ಬಾಡ್ಮಿಂಟನ್

ದಿನಾಂಕ: 13-3-2021 ರಂದು ಪದವಿ ಪೂರ್ವ ಶಿಕ್ಷಣ ಇಲಾಖೆ, ಉಡುಪಿ ಹಾಗೂ ಜ್ಞಾನ ಸುಧಾ ಪದವಿ ಪೂರ್ವ ಕಾಲೇಜು, ಗಣಿತ ನಗರ, ಕಾರ್ಕಳ ಇವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಜಿಲ್ಲಾ ಮಟ್ಟದ ಶಟಲ್ ಬಾಡ್ಮಿಂಟನ್ ಪಂದ್ಯಾವಳಿಯಲ್ಲಿ ಉಡುಪಿ ವಿದ್ಯೋದಯ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡ ಪ್ರಥಮ ಹಾಗೂ ಬಾಲಕರ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಬಾಲಕರ ವಿಭಾಗ        :    ರಾಯ್ಡನ್, ಶಾಶ್ವತ್, ಓಂಕಾರ್ ಪ್ರಭು, ಅಭಿನಂದನ್, ಸಮರ್ಥ್
ಬಾಲಕಿಯರ ವಿಭಾಗ    :    ರಕ್ಷಿತಾ ಆರ್. ಶೆಟ್ಟಿ, ಮಾಹಿಶ್ಮತಿ, ದೀತ್ಯಾ, ವೈಷ್ಣವಿ ಕಾಮತ್, ಗುಣಶ್ರೀ

ಐ.ಟಿ ಕ್ವಿಜ್ ರಾಜ್ಯ ಮಟ್ಟದಲ್ಲಿ ವಿದ್ಯೋದಯದ ಸಾಧನೆ

ಉಡುಪಿಯ ವಿದ್ಯೋದಯ ಟ್ರಸ್ಟ್ (ರಿ.)ನ ಅಂಗಸಂಸ್ಥೆಯಾದ ವಿದ್ಯೋದಯ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿ, ಸಾತ್ವಿಕ್ ಕುಮಾರ್ ಇವರು ಟಿ.ಸಿ.ಎಸ್. ಸಂಸ್ಥೆಯವರು ನಡೆಸಿದ ರಾಜ್ಯ ಮಟ್ಟದ ಐ.ಟಿ. ಕ್ವಿಜ್ ಸ್ಪರ್ಧೆಯಲ್ಲಿ ರಾಜ್ಯ ಮಟ್ಟದಲ್ಲಿ ದ್ವಿತೀಯ ಸ್ಥಾನವನ್ನು ಗಳಿಸಿರುತ್ತಾರೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಶ್ರೀ. ಎ.ಎಲ್. ಛಾತ್ರ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು ಮತ್ತು ಉಪನ್ಯಾಸಕ ವೃಂದದವರು ವಿದ್ಯಾರ್ಥಿಗೆ ಶುಭವನ್ನು ಕೋರಿದರು.

bottom of page