top of page

ವಿದ್ಯೋದಯ ಪದವಿ ಪೂರ್ವ ಕಾಲೇಜು : ಸಾಂಸ್ಕೃತಿಕ ಸ್ಪರ್ಧೆಗಳು - ರಾಜ್ಯಮಟ್ಟದ ಪ್ರಶಸ್ತಿ

ವಿದ್ಯೋದಯ ಟ್ರಸ್ಟ್ (ರಿ.)ನ ಅಂಗಸಂಸ್ಥೆ ವಿದ್ಯೋದಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಪ್ರಶಸ್ತಿ ಪಡೆದಿರುತ್ತಾರೆ. ದ್ವಿತೀಯ ಪಿಯುಸಿ ವಿದ್ಯಾರ್ಥಿ ರಕ್ಷಿತ್ ಆರ್. ಭಟ್ ಭಕ್ತಿಗೀತೆಯಲ್ಲಿ ದ್ವಿತೀಯ ಮತ್ತು ಪ್ರಥಮ ಪಿಯುಸಿ ವಿದ್ಯಾರ್ಥಿನಿ ಪ್ರಾಪ್ತಿ ಪ್ರದೀಪ್ ಚಿತ್ರಕಲೆಯಲ್ಲಿ ತೃತೀಯ ಬಹುಮಾನಗಳಿಸಿದ್ದಾರೆ. ರಾಜ್ಯ ಮಟ್ಟದ ಈ ಸಾಂಸ್ಕೃತಿಕ ಸ್ಪರ್ಧೆಗಳನ್ನು 14 ಡಿಸೆಂಬರ್ 2022 ರಂದು ಬೆಂಗಳೂರು ಉತ್ತರ ಜಿಲ್ಲೆಯ ಕೆ.ಎಲ್.ಇ. ಪದವಿ ಪೂರ್ವ ಕಾಲೇಜು, ರಾಜಾಜಿ ನಗರ, ಬೆಂಗಳೂರು ಇಲ್ಲಿ ಆಯೋಜಿಸಲಾಗಿತ್ತು. ವಿಜೇತ ವಿದ್ಯಾರ್ಥಿಗಳನ್ನು ಆಡಳಿತ ಮಂಡಳಿ, ಕಾಲೇಜು ಪ್ರಾಂಶುಪಾಲರು, ಬೋಧಕ-ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿವೃಂದ ಅಭಿನಂದಿಸಿದೆ.

ಕಾಲೇಜಿನ ಬಾಸ್ಕೆಟ್ ಬಾಲ್ ಕ್ರೀಡಾಳುಗಳು ರಾಜ್ಯಮಟ್ಟಕ್ಕೆ ಆಯ್ಕೆ

ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ ಸ್ಪರ್ಧೆ
ವಿದ್ಯೋದಯ ಪದವಿ ಪೂರ್ವ ಕಾಲೇಜು: ದ್ವಿತೀಯ - ರಾಜ್ಯಮಟ್ಟಕ್ಕೆ ಆಯ್ಕೆ

ಉಡುಪಿ: ವಿದ್ಯೋದಯ ಟ್ರಸ್ಟ್ (ರಿ.)ನ ಅಂಗ ಸಂಸ್ಥೆಯಾದ ವಿದ್ಯೋದಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ತಂಡ ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನವನ್ನು ಗಳಿಸಿರುತ್ತದೆ. ಕಾಲೇಜಿನ ವಿದ್ಯಾರ್ಥಿ ಜೆರೋಹಮ್ ಲಾಯ್ಡ್  ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದು ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು ಮತ್ತು ಸಿಬ್ಬಂದಿ ವರ್ಗ ಅಭಿನಂದಿಸಿರುತ್ತಾರೆ.

ಜಿಲ್ಲಾ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆ
ವಿದ್ಯೋದಯ ಪದವಿ ಪೂರ್ವ ಕಾಲೇಜು: ಪ್ರಥಮ - ರಾಜ್ಯಮಟ್ಟಕ್ಕೆ ಆಯ್ಕೆ

ಉಡುಪಿ: ವಿದ್ಯೋದಯ ಟ್ರಸ್ಟ್ (ರಿ.)ನ ಅಂಗ ಸಂಸ್ಥೆಯಾದ ವಿದ್ಯೋದಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ತಂಡ ಜಿಲ್ಲಾ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಗಳಿಸಿರುತ್ತದೆ. ಕಾರ್ಕಳದ ಭುವನೇಂದ್ರ ಕಾಲೇಜಿನಲ್ಲಿ 23-09-2022 ರಂದು ಪದವಿ ಪೂರ್ವ ಶಿಕ್ಞಣ ಇಲಾಖೆಯಿಂದ ಈ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು.  ರಾಜ್ಯಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಾದ ಭರತ್ ಮತ್ತು ಯಶವಂತ್ ಹಾಗೂ ತಂಡದ ಇತರ ಸದಸ್ಯರಾದ ಸುವಿತ್ ಶೆಟ್ಟಿ, ಶ್ರೀಪಾದ, ಮಾಸುಮ್ ಇಕ್ಬಾಲ್ ಇವರುಗಳನ್ನು ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು ಮತ್ತು ಸಿಬ್ಬಂದಿ ವರ್ಗ ಅಭಿನಂದಿಸಿರುತ್ತಾರೆ.

© Copyright©
bottom of page