VIDYODAYA PRE UNIVERSITY COLLEGE
Recognised as ‘A’ Grade P.U. College by the Dept. of Pre University Education, Karnataka
A Unit of Vidyodaya Trust (R.)
Vadiraja Road, Udupi - 576101, KARNATAKA, INDIA
Phone : 0820-2531021, email: vidyodayaudp@gmail.com
ರಾಜ್ಯ ಮಟ್ಟದ ಪುರಸ್ಕಾರ
ಉಡುಪಿ: ವಿದ್ಯೋದಯ ಟ್ರಸ್ಟ್ (ರಿ.)ನ ಅಂಗಸಂಸ್ಥೆ ವಿದ್ಯೋದಯ ಪದವಿ ಪೂರ್ವಕಾಲೇಜಿನ ವಿದ್ಯಾರ್ಥಿಗಳು ಪದವಿ ಪೂರ್ವ ಶಿಕ್ಷಣ ಇಲಾಖೆಯು ಬೆಂಗಳೂರಿನಲ್ಲಿ ಆಯೋಜಿಸಿದ 2019-20ನೇ ಸಾಲಿನ ರಾಜ್ಯಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಬಹುಮಾನ ವಿಜೇತರಾಗಿದ್ದಾರೆ. ದ್ವಿತೀಯ ಪಿಯುಸಿ ವಿಭಾಗದ ಇಂಗ್ಲೀಷ್ ಚರ್ಚಾ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಕು| ಶ್ರೀಲಕ್ಷ್ಮಿ ಮತ್ತು ಇಂಗ್ಲೀಷ್ ಪ್ರಬಂಧ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನವನ್ನು ಕು| ಮೈಥಿಲಿ ಪದವು ಪಡೆದಿದ್ದಾರೆ. ಪ್ರಥಮ ಪಿಯುಸಿ ವಿದ್ಯಾರ್ಥಿನಿ ಕು| ಲಿಪಿ ಹೆಗ್ಡೆ ಏಕಪಾತ್ರಾಭಿನಯದಲ್ಲಿ ದ್ವಿತೀಯ ಬಹುಮಾನ ಗಳಿಸಿ ಸಾಧನೆಗೈದಿದ್ದಾರೆ. ಸಾಧಕ ವಿದ್ಯಾರ್ಥಿಗಳನ್ನು ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ ವರ್ಗ, ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಅಭಿನಂದಿಸಿದರು.
ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ
ದಿನಾಂಕ : 30-11-2019 ರಂದು ಚಿಕ್ಕಮಗಳೂರಿನ ಸೈಂಟ್ ಜೋಸೆಫ್ ಬಾಲಕಿಯರ ಪದವಿಪೂರ್ವ ಕಾಲೇಜಿನಲ್ಲಿ ನಡೆದ 2019-20ನೇ ಸಾಲಿನ ಪದವಿ ಪೂರ್ವ ಶಿಕ್ಷಣ ಇಲಾಖೆಯ ವಿಭಾಗೀಯ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಉಡುಪಿಯ ವಿದ್ಯೋದಯ ಟ್ರಸ್ಟ್ (ರಿ.)ನ ಅಂಗ ಸಂಸ್ಥೆಯಾದ ವಿದ್ಯೋದಯ ಪದವಿ ಪೂರ್ವ ಕಾಲೇಜಿನ ದ್ವಿತೀಯ ವರ್ಷದಲ್ಲಿ ಕಲಿಯುತ್ತಿರುವ ಶ್ರೀಲಕ್ಷ್ಮಿ ಇಂಗ್ಲೀಷ್ ಚರ್ಚಾ ವಿಭಾಗದಲ್ಲಿ ಪ್ರಥಮ ಹಾಗೂ ಮೈಥಿಲೀ ಪದವು ಇಂಗ್ಲೀಷ್ ಪ್ರಬಂಧ ವಿಭಾಗದಲ್ಲಿ ಪ್ರಥಮ ಸ್ಥಾನವನ್ನೂ, ಪ್ರಥಮ ಪದವಿಪೂರ್ವ ತರಗತಿಯಲ್ಲಿ ಕಲಿಯುತ್ತಿರುವ ಲಿಪಿ ಹೆಗ್ಡೆ ಏಕಪಾತ್ರಾಭಿನಯದಲ್ಲಿ ಪ್ರಥಮ ಹಾಗೂ ಶ್ರೇಯಾ ಎಸ್. ರಾವ್ ಭಕ್ತಿಗೀತೆ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಗಳಿಸಿ ಬೆಂಗಳೂರಿನಲ್ಲಿ ನಡೆಯುವ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ. ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ ವರ್ಗ ಹಾಗೂ ಸಿಬ್ಬಂದಿ ವರ್ಗದವರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿರುತ್ತಾರೆ.
National Level Chess Competition - II Place
Prajwal P. of 1st F got selected for national level chess competition. He won the top II place in state level competition.
ರಾಜ್ಯ ಪುರಸ್ಕಾರ : ರಾಜ್ಯಮಟ್ಟದ ಕ್ರೀಡಾ ಸ್ಪರ್ಧೆ
ವಿದ್ಯೋದಯ ಟ್ರಸ್ಟ್ (ರಿ.)ನ ಅಂಗಸಂಸ್ಥೆಯಾದ ವಿದ್ಯೋದಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಕು| ನಿಸರ್ಗ ಕರಾಟೆ ಸ್ಪರ್ಧೆಯಲ್ಲಿ ರಜತ ಪದಕವನ್ನು ಗಳಿಸಿರುತ್ತಾರೆ. 2019-20 ನೇ ಸಾಲಿನ ರಾಜ್ಯಮಟ್ಟದ ಕ್ರೀಡಾ ಸ್ಪರ್ಧೆಯನ್ನು ಪದವಿ ಪೂರ್ವ ಶಿಕ್ಷಣ ಇಲಾಖೆಯು ನವೆಂಬರ್ 4 ಮತ್ತು 5 ರಂದು ಮುರುಡೇಶ್ವರದ ಆರ್.ಎನ್.ಶೆಟ್ಟಿ ಪದವಿಪೂರ್ವ ಕಾಲೇಜಿನಲ್ಲಿ ಆಯೋಜಿಸಿತ್ತು. ಸಾಧನೆಗೈದ ವಿದ್ಯಾರ್ಥಿನಿಯನ್ನು ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ ವೃಂದ ಮತ್ತು ವಿದ್ಯಾರ್ಥಿಗಳು ಅಭಿನಂದಿಸಿದರು.